ಪುತ್ತೂರು: ನಗರದ ಬಸ್ಸು ನಿಲ್ದಾಣದ ಪಕ್ಕದಲ್ಲಿರುವ ಹೊಟೇಲ್ ಒಂದರಲ್ಲಿ ಜ್ಯೂಸ್ ಕುಡಿಯುತ್ತಿದ್ದ ಭಿನ್ನ ಮತೀಯ ಜೋಡಿಯನ್ನು ಹಿಂದೂ ಸಂಘಟನೆಯ ಸದಸ್ಯರು ಪೊಲೀಸರಿಗೆ ಒಪ್ಪಿಸಿದ ಘಟನೆ ನಡೆದಿದೆ.
ಯುವಕ ಮತ್ತು ಯುವತಿ ಇಬ್ಬರೂ ಶಿವಮೊಗ್ಗದವರಾಗಿದ್ದು, ಯುವತಿ ಪಿ.ಜಿ. ಯಲ್ಲಿದ್ದುಕೊಂಡು ಕಾಲೇಜಿಗೆ ಹೋಗುತ್ತಿದ್ದಳು ಎಂದು ತಿಳಿದು ಬಂದಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದ ಹಾಗೆ ಯಾವುದೇ ಪ್ರಕರಣ ದಾಖಲಾಗಿಲ್ಲ. ಪೊಲೀಸರು ಜೋಡಿಯ ಹೆತ್ತವರಿಗೆ ಮಾಹಿತಿ ನೀಡಿ ವಿಚಾರಣೆ ನಡೆಸಿದ್ದಾರೆ.