ಬೆಂಗಳೂರು: ಮಾದಕ ದ್ರವ್ಯಗಳ ಸಾಗಾಟ, ಮಾರಾಟದ ವಿರುದ್ಧ ಸಮರ ಸಾರಿರುವ ಡಿಆರ್‌ಐ ಅಧಿಕಾರಿಗಳು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 38.4 ಕೋಟಿ. ರೂ. ಮೌಲ್ಯದ 3.2 ಕೆ.ಜಿ. ಡ್ರಗ್ಸ್ ವಶಕ್ಕೆ ಪಡೆದಿದ್ದಾರೆ.
ಜೆನ್ನಿಫರ್ ಅಬ್ಬೇ ಎಂಬ ಘಾನಾ ಮೂಲದ ವ್ಯಕ್ತಿ ದೋಹಾದಿಂದ ಬೆಂಗಳೂರಿಗೆ ಬಂದಿದ್ದು, ಅವರನ್ನು ಡಿಆರ್‌ಐ ಅಧಿಕಾರಿಗಳು ತಪಾಸಣೆಗೆ ಒಳಪಡಿಸಿದಾಗ ದೊಡ್ಡ ಮೌಲ್ಯದ ಕೊಕೇನ್ ಡ್ರಗ್ಸ್ ಪತ್ತೆಯಾಗಿದೆ.
ಅಬ್ಬೇಯನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದು, ವಿಚಾರಣೆಗೆ ಒಳಪಡಿಸಿದ್ದಾರೆ. ಹೆಚ್ಚಿನ ವಿಚಾರಗಳು ತನಿಖೆಯ ನಂತರವಷ್ಟೇ ತಿಳಿದು ಬರಬೇಕಿದೆ.