ಬೆಳಗಾವಿ: ಪಾಂಗುಳ ಗಲ್ಲಿಯಲ್ಲಿರುವ ಅಶ್ವತ್ಥಾಮ ದೇಗುಲದ ಮೇಲೆ ಕಲ್ಲೆಸೆದ ಕಿಡಿಗೇಡಿಯನ್ನು ಸ್ಥಳೀಯರು ಪೊಲೀಸರಿಗೆ ಒಪ್ಪಿಸಿದ ಘಟನೆ ನಡೆದಿದೆ. ಆರೋಪಿಯನ್ನು ಉಜ್ವಲ್ ನಗರ ನಿವಾಸಿ ಯಾಶಿರ್ ಎಂದು ಗುರುತಿಸಲಾಗಿದೆ. ಆರೋಪಿ ದೇಗುಲದತ್ತ ಕಲ್ಲು ತೂರಾಟ ನಡೆಸುತ್ತಿದ್ದ ಹಾಗೆಯೇ ಸ್ಥಳೀಯರು ಆತನನ್ನು ಹಿಡಿದು ಕಂಬಕ್ಕೆ ಕಟ್ಟಿದ್ದಾರೆ. ಈ ಬಗ್ಗೆ ಅವನನ್ನು ವಿಚಾರಣೆ ಮಾಡಿದಾಗ ‘ಮೊನ್ನೆ ಯಾರೋ ಬುರ್ಖಾ ಹಾಕಿಕೊಂಡು ನೃತ್ಯ ಮಾಡುತ್ತಿದ್ದರು. ಅದಕ್ಕಾಗಿ ನಾನು ಕಲ್ಲು ಎಸೆದಿದ್ದೇನೆ. ನನ್ನಿಂದ ತಪ್ಪಾಗಿದೆ ಕ್ಷಮಿಸಿ’ ಎಂದು ಹೇಳಿದ್ದಾನೆಂದು ತಿಳಿದು ಬಂದಿದೆ.