ರಾಮನಗರ: ಬಿಡದಿಯ ಕಂಪೆನಿಯೊಂದರ ಶೌಚಾಲಯದಲ್ಲಿ ಪಾಕ್ ಪರ ಘೋಷಣೆ ಬರೆದ ಇಬ್ಬರು ಆರೋಪಿಗಳನ್ನು ಬಿಡದಿಯ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಆರೋಪಿಗಳನ್ನು ಉತ್ತರ ಕರ್ನಾಟಕ ಮೂಲದ ಹೈಮದ್ ಹುಸೇನ್ ಮತ್ತು ಸಾಧಿಕ್ ಎಂದು ಗುರುತಿಸಲಾಗಿದೆ. ಈ ಖದೀಮರು ಟೊಯೋಟಾ ಕಾರ್ಖಾನೆಯಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದರು. ಇವರು ಶೌಚಾಲಯದ ಗೋಡೆಯ ಮೇಲೆ ಪಾಕಿಸ್ತಾನಕ್ಕೆ ಜಯಕಾರ ಹಾಕಿದ್ದಲ್ಲದೆ, ಕನ್ನಡಿಗರ ಬಗ್ಗೆಯೂ ಅವಹೇಳನಕಾರಿ ಪದ ಬರೆದಿದ್ದರು.
ರಾತ್ರಿ ಪಾಳಿಯಲ್ಲಿ ಕೆಲಸ ಮಾಡುತ್ತಿದ್ದ ಕಿಡಿಗೇಡಿಗಳು ಈ ಕೆಲಸ ಮಾಡಿದ್ದಾರೆ. ಆರಂಭದಲ್ಲಿ ಇದನ್ನು ಕಂಪೆನಿ ಮುಚ್ಚಿ ಹಾಕಲು ಪ್ರಯತ್ನ ನಡೆಸಿತ್ತು. ಆದರೆ ಈ ಬರಹ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಈ ಘಟನೆ ಮುನ್ನೆಲೆಗೆ ಬಂದಿದೆ.
ಘಟನೆಯ ಬಗ್ಗೆ ಕನ್ನಡ ಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ.