ಮಂಗಳೂರು: ರಿಕ್ಷಾದಲ್ಲಿ ಅಕ್ರಮ ಗೋಮಾಂಸ ಸಾಗಾಟ ಮಾಡುತ್ತಿದ್ದ ಜಾಲವನ್ನು ಹಿಂದೂ ಸಂಘಟನೆಯ ಕಾರ್ಯಕರ್ತರು ಪತ್ತೆ ಮಾಡಿದ್ದಾರೆ. ಖಚಿತ ಮಾಹಿತಿಯ ಮೇರೆಗೆ ಹಿಂದೂ ಸಂಘಟನೆಯ ಸದಸ್ಯರು ಪಾಂಡೇಶ್ವರದ ಸಮೀಪ ಅಕ್ರಮವಾಗಿ ಗೋಮಾಂಸ ಸಾಗಿಸುತ್ತಿದ್ದ ರಿಕ್ಷಾವನ್ನು ತಡೆದಿದ್ದಾರೆ. ಈ ವೇಳೆ ರಿಕ್ಷಾದಲ್ಲಿ ಸುಮಾರು 200 kg ಗೂ ಅಧಿಕ ಗೋಮಾಂಸ ಇರುವುದು ಪತ್ತೆಯಾಗಿದೆ. ಪಾಂಡೇಶ್ವರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.