ವಿಟ್ಲ: ಸಂಬಂಧಪಟ್ಟ ಇಲಾಖೆಯ ಅನುಮತಿ ಪಡೆಯದೆ ವಿಟ್ಲದಿಂದ ಕೇರಳಕ್ಕೆ ಅಕ್ರಮವಾಗಿ ಮರದ ದಿಮ್ಮಿಗಳನ್ನು ಸಾಗಿಸುತ್ತಿರುವ ಖಚಿತ ಮಾಹಿತಿ ಪಡೆದ ಅರಣ್ಯ ಸಂಚಾರಿ ದಳದ ಅಧಿಕಾರಿಗಳು ಕಡಂಬುವಿನಲ್ಲಿ ಕಾರ್ಯಾಚರಣೆ ನಡೆಸಿ ಪಿಕ್‌ಅಪ್ ವಾಹನವನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿ ಪಿಕ್‌ಅಪ್ ಚಾಲಕ ಅನ್ವರ್ ಸಾದತ್ ಅಮ್ಟೂರು ವಿರುದ್ಧ ಪ್ರಕರಣ ದಾಖಲು ಮಾಡಲಾಗಿದ್ದು, ವಿಚಾರಣೆಗೆ ಹಾಜರಾಗುವಂತೆ ಸೂಚಿಸಿ ನೊಟೀಸ್ ಜಾರಿ ಮಾಡಲಾಗಿದೆ. ಪುತ್ತೂರಿನ ಕಡೆಯಿಂದ ಅಕ್ರಮವಾಗಿ ಮರದ ದಿಮ್ಮಿಗಳನ್ನು ವಿಟ್ಲ ಮಾರ್ಗವಾಗಿ ಕೇರಳಕ್ಕೆ ಸಾಗಿಸುತ್ತಿದ್ದಾಗ ಈ ಕಾರ್ಯಾಚರಣೆ ನಡೆಸಲಾಗಿದೆ. ಸುಮಾರು ಮೂರೂವರೆ ಲಕ್ಷದ ಸೊತ್ತು ವಶಕ್ಕೆ ಪಡೆಯಲಾಗಿದೆ ಎಂದು ತಿಳಿದು ಬಂದಿದೆ.