ಬೆಂಗಳೂರು: ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ, ಸದ್ಯ ಜಾಮೀನಿನ ಮೇಲೆ ಹೊರಗಡೆ ಇರುವ ನಟ ದರ್ಶನ್ ಅವರು ಕೇರಳದ ದೇಗುಲವೊಂದಕ್ಕೆ ತೆರಳಿ ಪೂಜೆ ಸಲ್ಲಿಸಿದ್ದಾರೆ. ದರ್ಶನ್ ಮಾಡಾಯಿಕಾವು ದೇಗುಲಕ್ಕೆ ತಮ್ಮ ಕುಟುಂಬ ಸಮೇತ ತೆರಳಿ ದೇವರ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿದ್ದಾರೆ ಎಂದು ತಿಳಿದು ಬಂದಿದೆ. ಪತ್ನಿ ವಿಜಯಲಕ್ಷ್ಮಿ, ಪುತ್ರ ವಿನೀಶ್ ಮತ್ತು ಇತರ ತಮ್ಮ ಜೊತೆಗೆ ಈ ದೇಗುಲಕ್ಕೆ ತೆರಳಿ ಪೂಜೆ ಸಲ್ಲಿಸಿದ್ದಾರೆ ಎಂದು ತಿಳಿದು ಬಂದಿದೆ. ಮಾಡಾಯಿಕಾವು ದೇಗುಲ ವಿಶೇಷವಾಗಿ ಶತ್ರು ಸಂಹಾರ ಪೂಜೆಗೆ ಪ್ರಸಿದ್ಧಿ ಪಡೆದ ದೇವಾಲಯವಾಗಿದೆ.