ಬೆಂಗಳೂರು: ಅಕ್ರಮ ಚಿನ್ನ ಸಾಗಾಟ ಪ್ರಕರಣದ ಆರೋಪಿ ರನ್ಯಾ ರಾವ್ ಅವರ ಜಾಮೀನು ಅರ್ಜಿಯ ವಿಚಾರಣೆ ಮುಂದೂಡಿದೆ. ಬೆಂಗಳೂರಿನ 64 ನೇ ಸೆಷನ್ಸ್ ಕೋರ್ಟ್ ಈ ಅರ್ಜಿಯ ವಿಚಾರಣೆ ನಡೆಸಿ, ಇದರ ಮುಂದಿನ ವಿಚಾರಣೆಯನ್ನು ಮಾರ್ಚ್ 24 ಕ್ಕೆ ಮುಂದೂಡಿ ಆದೇಶ ಹೊರಡಿಸಿದೆ. ನಟಿ ರನ್ಯಾ ರಾವ್ ದುಬೈನಿಂದ ಅಕ್ರಮವಾಗಿ ಚಿನ್ನ ಕಳ್ಳ ಸಾಗಾಟ ನಡೆಸಿ DRI ಅಧಿಕಾರಿಗಳಿಂದ ಬಂಧನಕ್ಕೆ ಒಳಪಟ್ಟವರು.