ಬೆಂಗಳೂರು: ಮಚ್ಚು ಹಿಡಿದು ರೀಲ್ಸ್ ಮಾಡಲು ಹೋಗಿ ಬಿಗ್‌ಬಾಸ್ ಸ್ಪರ್ಧಿಗಳಿಬ್ಬರ ವಿರುದ್ಧ ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಿಗ್ ಬಾಸ್‌ನಲ್ಲಿ ಭಾಗವಹಿಸಿದ್ದ ವಿನಯ್ ಹಾಗೂ ರಜತ ಮಚ್ಚು ಹಿಡಿದು ಕರಿಯ ಚಿತ್ರದ ಸ್ಟೈಲ್‌ನಲ್ಲಿ ಮಚ್ಚು ಹಿಡಿದು ಒಂದು ರೀಲ್ಸ್ ಮಾಡಿದ್ದಾರೆ. ಈ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲೂ ಸಖತ್ ವೈರಲ್ ಆಗಿತ್ತು. ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ಈ ಇಬ್ಬರ ಮೇಲೆ ಪ್ರಕರಣ ದಾಖಲಾಗಿದೆ.