ಬೆಂಗಳೂರು: ಕರಿಯಾ ಚಲನಚಿತ್ರದ ತರದಲ್ಲಿ ಮಚ್ಚು ಹಿಡಿದು ರೀಲ್ಸ್ ಮಾಡಿದ ಬಿಗ್‌ಬಾಸ್ ಖ್ಯಾತಿಯ ರಜತ್ ಮತ್ತು ವಿನಯ್‌ನನ್ನು ಬಸವೇಶ್ವರ ನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಇಬ್ಬರೂ ಆರೋಪಿಗಳಿಗೆ ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ಬುಲಾವ್ ನೀಡಿದ್ದರು. ಇವರು ವಿಚಾರಣೆಗೆ ಹಾಜರಾಗುತ್ತಿದ್ದಂತೆ ಅವರನ್ನು ವಶಕ್ಕೆ ಪಡೆಯಲಾಗಿದೆ. ಈ ಇಬ್ಬರೂ ಕೈಯಲ್ಲಿ ಮಚ್ಚು ಹಿಡಿದು ಮಾಡಿದ ರೀಲ್ಸ್ ಮಾಡಿದ್ದು, ಇದು ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿತ್ತು. ಆ ಬಳಿಕ ಈ ಸಂಬಂಧ ಪೊಲೀಸರು ಇವರಿಬ್ಬರ ಮೇಲೆ ಕೇಸು ದಾಖಲಿಸಿಕೊಂಡಿದ್ದರು.