ಗದಗ: ಲಕ್ಷ್ಮೇಶ್ವರ ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ 23 ಮಂದಿ ಆರೋಪಿಗಳಿಗೆ ಬರೋಬ್ಬರಿ 8 ವರ್ಷಗಳ ಬಳಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಕಠಿಣ ಶಿಕ್ಷೆ ವಿಧಿಸಿದೆ.
ಆರೋಪಿಗಳಿಗೆ 5 ವರ್ಷಗಳ ಕಠಿಣ ಶಿಕ್ಷೆ, 36 ಲಕ್ಷದ 87 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದೆ.
ಆರೋಪಿಗಳು 8 ವರ್ಷಗಳ ಹಿಂದೆ 2017 ರ ಫೆ. 5 ರಂದು ಪೊಲೀಸು ಠಾಣೆಗೆ ಬೆಂಕಿ ಹಚ್ಚಿ ಪುಂಡಾಟ ಮೆರೆದಿದ್ದರು. ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದವರನ್ನು ಪೊಲೀಸರು ಹಿಡಿದರು ಎನ್ನುವ ಕಾರಣಕ್ಕೆ ಪುಂಡರು ಈ ರೀತಿಯ ವರ್ತನೆ ತೋರಿದ್ದರು. ಈ ಘಟನೆಯಲ್ಲಿ ಓರ್ವ ಸಾವನ್ನಪ್ಪಿದ್ದ. ಇದರಿಂದ ಆಕ್ರೋಶಗೊಂಡ ತಂಡ ಪ್ರತಿಭಟನೆ ನಡೆಸಿತ್ತು. ಈ ಸಂದರ್ಭದಲ್ಲಿ ಪೊಲೀಸ್ ಠಾಣೆಯ ಮೇಲೆ ಬೆಂಕಿ ಹಚ್ಚಲಾಗಿತ್ತು. ಪೊಲೀಸರ ಜೀಪ್, ಬೈಕ್‌ಗಳಿಗೂ ಬೆಂಕಿ ಹಚ್ಚಿ ಅಪಾರ ಪ್ರಮಾಣದಲ್ಲಿ ನಷ್ಟವಾಗುವಂತೆ ಮಾಡಲಾಗಿತ್ತು.