ಮಂಗಳೂರು: ಅಕ್ರಮವಾಗಿ ಗೋ ಸಾಗಾಟ ಮಾಡುತ್ತಿದ್ದ ಖದೀಮರನ್ನು ತಡೆದ ಭಜರಂಗದಳದ ಕಾರ್ಯಕರ್ತರು ವಾಹನವನ್ನು ಪೊಲೀಸರಿಗೆ ಒಪ್ಪಿಸಿದ ಘಟನೆ ಬಜಪೆ ಸುರಲ್ಪಾಡಿಯಲ್ಲಿ ನಡೆದಿದೆ. ಅಕ್ರಮ ಗೋ ಸಾಗಾಟದ ಖಚಿತ ಮಾಹಿತಿ ಪಡೆದ ಭಜರಂಗದಳದ ಸದಸ್ಯರು ಅದರ ಸಾಗಾಟಕ್ಕೆ ಬಳಸಿದ ವಾಹನವನ್ನು ತಡೆದು ಪರಿಶೀಲನೆ ನಡೆಸಿದ್ದಾರೆ. ಈ ವೇಳೆ 25 ಗೋವುಗಳ ಕೈಕಾಲುಗಳನ್ನು ಅಮಾನುಷವಾಗಿ ಕಟ್ಟಿ ಸಾಗಾಟ ಮಾಡುತ್ತಿರುವುದು ಕಂಡುಬಂದಿದೆ. ಈ ವೇಳೆ ವಾಹನದ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ವಾಹನದಲ್ಲಿದ್ದ ಗೋವುಗಳನ್ನು ರಕ್ಷಿಸಿದ ಭಜರಂಗದಳದ ಕಾರ್ಯಕರ್ತರು ವಾಹನವನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದ ಹಾಗೆ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ.