ಲಕ್ನೋ: ರಂಜಾನ್‌ನ ಕೊನೆಯ ಶುಕ್ರವಾರದಂದು ರಸ್ತೆಯಲ್ಲಿ ನಮಾಜ್ ಮಾಡಿ ಸಾರ್ವಜನಿಕರಿಗೆ ತೊಂದರೆ ನೀಡಿದಲ್ಲಿ ಅಂತಹವರ ಪಾಸ್‌ಪೋರ್ಟ್ ಮತ್ತು ಡ್ರೈವಿಂಗ್ ಲೈಸನ್ಸ್ ರದ್ದು ಮಾಡುವುದಾಗಿ ಉತ್ತರ ಪ್ರದೇಶದ ಮೀರತ್‌ನ ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ಈ ಸಂಬಂಧ ಮೀರತ್‌ನ ಪೊಲೀಸ್ ಅಧೀಕ್ಷಕ ಆಯುಷ್ ವಿಕ್ರಮ್ ಸಿಂಗ್ ಎಚ್ಚರಿಕೆ ನೀಡಿದ್ದು, ರಸ್ತೆಗಳಲ್ಲಿ ನಮಾಜ್ ಮಾಡಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ. ಡ್ರೈವಿಂಗ್ ಲೈಸನ್ಸ್ ಮತ್ತು ಪಾಸ್‌ಪೋರ್ಟ್ ರದ್ದು ಮಾಡಬಹುದು ಎಂದು ಅವರು ಹೇಳಿದ್ದಾರೆ. ನಮಾಜ್ ಮಾಡಲು ಸ್ಥಳೀಯ ಮಸೀದಿಗಳು ಅಥವಾ ಗೊತ್ತುಪಡಿಸಿದ ಜಾಗಗಳನ್ನೇ ಬಳಸಬೇಕು ಎಂದು ಅವರು ಸೂಚನೆ ನೀಡಿದ್ದಾರೆ. ಈ ಸಂಬಂಧ ಕೇಂದ್ರ ಸಚಿವ ಮತ್ತು ರಾಷ್ಟ್ರೀಯ ಲೋಕದಳ ನಾಯಕ ಜಯಂತ್ ಸಿಂಗ್ ಚೌಧರಿ ಮಾತನಾಡಿದ್ದು, ಕ್ರಿಮಿನಲ್ ಪ್ರಕರಣಗಳು ದಾಖಲಾದವರ ಡ್ರೈವಿಂಗ್ ಲೈಸನ್ಸ್ ಮತ್ತು ಪಾಸ್‌ಪೋರ್ಟ್ ರದ್ದು ಮಾಡಬಹುದು. ಆ ಬಳಿಕ ಹೊಸ ಪಾಸ್‌ಪೋರ್ಟ್ ಪಡೆಯಲು ಕೋರ್ಟಿನಿಂದ ಎನ್‌ಒಸಿ ಪಡೆಯಬೇಕು. ಅದಿಲ್ಲದೆ ಹೊಸ ಪಾಸ್‌ಪೋರ್ಟ್ ಪಡೆಯಲು ಕಷ್ಟವಾಗುತ್ತದೆ. ಅಂತಹ ವ್ಯಕ್ತಿಗಳು ದೋಷಮುಕ್ತರಾಗುವ ವರೆಗೆ ಅವರ ದಾಖಲೆಗಳನ್ನು ಮಟ್ಟಗೋಲು ಹಾಕಲಾಗುವುದು ಎಂದು ಹೇಳಿದ್ದಾರೆ.