ಬೆಂಗಳೂರು: ಕರ್ನಾಟಕದ ಕೆಲವು ಸರ್ಕಾರಿ ಶಾಲೆಗಳಲ್ಲಿನ ವಿದ್ಯಾರ್ಥಿಗಳಲ್ಲಿ ಶೌಚಾಲಯಗಳನ್ನು ತೊಳೆಸುವುದು, ಗುಡಿಸುವುದು ಇತ್ಯಾದಿಗಳನ್ನು ಮಾಡಿಸುವುದು ಕಂಡುಬಂದಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಲು ಮುಂದಾಗಿದೆ. ಈ ವಿಷಯಕ್ಕೆ ಸಂಬಂಧಿಸಿದ ಹಾಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಾಧ್ಯಮ ಪ್ರಕಟಣೆಯಲ್ಲಿ ಮಾತನಾಡಿದ್ದು, ಈಗ ಅಂತಹ ಘಟನೆಗಳು ನಡೆಯುತ್ತಿಲ್ಲ. ಶಾಲೆಗಳಿಗೆ ನೀಡಲಾಗುವ ಮೈಂಟೇನೆನ್ಸ್ ಹಣವನ್ನು ಸಿಎಂ ಸಿದ್ದರಾಮಯ್ಯ ಎರಡು ಪಟ್ಟು ಹೆಚ್ಚಿಸಿದ್ದಾರೆ ಎಂದಿದ್ದಾರೆ. ಹಾಗೆಯೇ ಶಾಲಾ ಮಕ್ಕಳಿಂದ ಕ್ಲೀನ್ ಮಾಡಿಸುವ ಪ್ರಕರಣಗಳು ಕಂಡುಬಂದಲ್ಲಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಆ ಕೆಲಸಗಳನ್ನೆಲ್ಲಾ ಶಾಲಾ ಸುಧಾರಣಾ ಸಮಿತಿಗಳು ನೋಡಿಕೊಳ್ಳಬೇಕು ಎಂದು ಸಚಿವರು ಹೇಳಿದ್ದಾರೆ.