ಬೆಂಗಳೂರು: ಪತ್ನಿಯನ್ನು ಕೊಂದು ಶವವನ್ನು ಸೂಟ್‌ಕೇಸಿನಲ್ಲಿ ಹಾಕಿ ಶೌಚಾಲಯದಲ್ಲಿಟ್ಟು ಪುಣೆಗೆ ಪರಾರಿಯಾಗಿ, ಬಳಿಕ ಪೊಲೀಸರ ವಶವಾಗಿದ್ದ ಪತಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಆರೋಪಿ ರಾಕೇಶ್‌ನನ್ನು ಬಂಧಿಸಿದ ಪೊಲೀಸರು ಮ್ಯಾಜಿಸ್ಟ್ರೇಟ್ ನಿವಾಸದಲ್ಲಿ ಹಾಜರುಪಡಿಸಿದ್ದರು. ವಿಚಾರಣೆಯ ಬಳಿಕ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದ್ದು, ಆತನನ್ನು ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಲಾಗಿದೆ.
ಆರೋಪಿ ರಾಕೇಶ್‌ನ ಅಪರಾಧ ಪ್ರಾಥಮಿಕ ತನಿಖೆಯಲ್ಲಿ ಸಾಬೀತಾಗಿದೆ. ಈ ಸಂಬಂಧ ಹೆಚ್ಚಿನ ತನಿಖೆ ಯನ್ನು ಪೊಲೀಸರು ನಡೆಸುತ್ತಿದ್ದಾರೆ. ಗಂಡ ಹೆಂಡಿರ ನಡುವಿನ ಧೀರ್ಘ ಕಾಲದ ಮವಸ್ತಾಪವೇ ಈ ಕೊಲೆಗೆ ಕಾರಣ ಎಂದು ತಿಳಿದು ಬಂದಿದೆ.