ಉಡುಪಿ: ಸಾರ್ವಜನಿಕವಾಗಿ ವ್ಯಕ್ತಿಯೋರ್ವರ ಜೊತೆಗೆ ಅಸಭ್ಯವಾಗಿ ವರ್ತಿಸಿದ ಪೊಲೀಸ್ ಸಿಬ್ಬಂದಿಯ ಮೇಲೆ ಪೊಲೀಸರು ಸುಮೋಟೊ ಪ್ರಕರಣ ದಾಖಲಿಸಿದ್ದಾರೆ.
ಮಣಿಪಾಲ ಪೊಲೀಸ್ ಠಾಣೆಯ ಕಾನ್ಸ್ಟೇಬಲ್ ಶರಣ ಬಸವ ವಿರುದ್ಧ ಪ್ರಕರಣ ದಾಖಲಾಗಿದೆ. ಅವರು ಸುಮಂತ್ ಎಂಬವರ ಜೊತೆಗೆ ಅಸಭ್ಯವಾಗಿ ವರ್ತಿಸಿದ್ದರು. ಈ ಬಗ್ಗೆ ಸುಮಂತ್ ಅವರು ಪೊಲೀಸರ ಗಮನಕ್ಕೆ ತಂದಿದ್ದು, ಪೊಲೀಸರು ಸ್ವಯಂಪ್ರೇರಿತವಾಗಿ ಕೇಸು ದಾಖಲಿಸಿಕೊಂಡಿದ್ದಾರೆ.