ಪುತ್ತೂರು: ನಿಷೇಧಿತ ಮಾದಕ ವಸ್ತು ಎಂಡಿಎಂಎಯನ್ನು ಕಾರಿನಲ್ಲಿ ಸಾಗಾಟ ಮಾಡುತ್ತಿದ್ದ ಈರ್ವರು ಆರೋಪಿಗಳನ್ನು ನಗರ ಪೊಲೀಸರು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆರೋಪಿಗಳನ್ನು ಇಸುಬು ಫೈಜಲ್ ಮತ್ತು ತಸ್ಲಿಪ್ ಎಂದು ಗುರುತಿಸಲಾಗಿದೆ. ನಗರ ಪೊಲೀಸರು ನರಿಮೊಗರಿನ ಮುಕ್ವೆಯಲ್ಲಿ ವಾಹನ ತಪಾಸಣೆ ನಡೆಸುತ್ತಿದ್ದರು. ಈ ಸಂದರ್ಭದಲ್ಲಿ ಸುಬ್ರಹ್ಮಣ್ಯ ಕಡೆಯಿಂದ ಬಂದ ಕಾರನ್ನು ಪರಿಶೀಲನೆ ಮಾಡಿದಾಗ ಅದರ ಡ್ಯಾಶ್‌ಬೋರ್ಡ್‌ನಲ್ಲಿ ಡ್ರಗ್ಸ್ ಸೇವನಾ ವಸ್ತುಗಳು, ತೂಕ ಮಾಪನಗಳು ಕಂಡು ಬಂದಿತ್ತು. ಈ ಹಿನ್ನೆಲೆಯಲ್ಲಿ ಕಾರಿನಲ್ಲಿದ್ದ ಇಬ್ಬರನ್ನು ಪ್ರಶ್ನಿಸಿದಾಗ ಉತ್ತರ ನೀಡಲು ತಡವರಿಸಿದ್ದಾರೆ. ಆ ಬಳಿಕ ತಮ್ಮ ಬಳಿ ನಿಷೇಧಿತ ಡ್ರಗ್ಸ್ ಇರುವುದಾಗಿ ಒಪ್ಪಿಕೊಂಡಿದ್ದರು. ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.