ಬೆಂಗಳೂರು: ಅಕ್ರಮ ಚಿನ್ನ ಸಾಗಾಟ ಪ್ರಕರಣಕ್ಕೆ ಸಂಬಂಧಿಸಿದ ಹಾಗೆ ಜೈಲು ಪಾಲಾಗಿರುವ ನಟಿ ರನ್ಯಾ ರಾವ್ ಜಾಮೀನು ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.
ಈ ಹಿಂದೆ ಜಾಮೀನು ಕೋರಿ ಬೆಂಗಳೂರಿನ 64 ನೇ ಸಿಸಿಎಚ್ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಆದರೆ ನ್ಯಾಯಾಲಯ ಹಲವಾರು ಕಾರಣಗಳನ್ನು ನೀಡಿ ಜಾಮೀನು ಅರ್ಜಿಯನ್ನು ವಜಾ ಮಾಡಿತ್ತು. ಈ ಹಿನ್ನೆಲೆಯಲ್ಲಿ ರನ್ಯಾ ವಕೀಲರು ಹೈಕೋರ್ಟ್‌ಗೆ ಮನವಿ ಮಾಡಿರುವುದಾಗಿದೆ.
ಕಳೆದ ಮಾರ್ಚ್ 3 ರಂದು ರನ್ಯಾರನ್ನು ಅಕ್ರಮ ಚಿನ್ನ ಕಳ್ಳಸಾಗಾಟ ಮಾಡಿದ ಕಾರಣಕ್ಕೆ ಡಿಆರ್‌ಐ ಅಧಿಕಾರಿಗಳು ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದರು. ಪ್ರಸ್ತುತ ರನ್ಯಾ ಪರಪ್ಪನ ಅಗ್ರಹಾರದಲ್ಲಿ ಬಂಧನದಲ್ಲಿದ್ದಾರೆ.