ತುಮಕೂರು: ಎಂಎಲ್‌ಸಿ ರಾಜೇಂದ್ರ ಅವರನ್ನು ಹತ್ಯೆ ಮಾಡಲು ಸಂಚು ಹೂಡಿದ, ಸುಪಾರಿ ನೀಡಿದ ಪ್ರಕರಣಕ್ಕೆ ಸಂಬಂಧಿಸಿದ ಹಾಗೆ ಆರೋಪಿಗಳಾದ ಸೋಮ ಮತ್ತು ಅಮಿತ್ ಪೊಲೀಸರಿಗೆ ಶರಣಾಗಿದ್ದಾರೆ.
ಸೋಮ, ಅಮಿತ್ ಶರಣಾಗುತ್ತಿದ್ದಂತೆ ಪ್ರಕರಣದ ಮತ್ತೊಬ್ಬ ಆರೋಪಿ ಭರತ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಈತ ಈ ಪ್ರಕರಣದಲ್ಲಿ ಪೊಲೀಸರ ಹಾದಿ ತಪ್ಪಿಸುವುದು ಹೇಗೆ ಮತ್ತು ಸಾಕ್ಷ್ಯಗಳನ್ನು ನಾಶ ಮಾಡುವುದು ಹೇಗೆ ಎನ್ನುವ ಬಗ್ಗೆ ರೂಪುರೇಶೆಗಳನ್ನು ಈತನೇ ಸಿದ್ದಪಡಿಸಿದ್ದ ಎಂದು ತಿಳಿದು ಬಂದಿದೆ.
ಹಾಗೆಯೇ ಪ್ರಕರಣದ ಆರೋಪಿ ಸೋಮನ ಗೆಳೆಯ ಕಾರ್ಪೆಂಟರ್ ಮನು ಎಂಬವನನ್ನು ಪೊಲೀಸರು ಬಂಧಿಸಿದ್ದಾರೆ. ಮನುವಿನ ಬ್ಯಾಂಕ್ ಖಾತೆ ಮೂಲಕವೇಸೋಮ ವ್ಯವಹಾರ ನಡೆಸುತ್ತಿದ್ದ. ಹಾಗೆಯೇ ಈ ಪ್ರಕರಣಕ್ಕೆ ಸಂಬಂಧಿಸಿದ ಹಾಗೆ 70 ಲಕ್ಷ ರೂ. ಒಪ್ಪಂದದಲ್ಲಿ 5 ಲಕ್ಷ ರೂ. ಮನುವಿನ ಖಾತೆಗೆ ರವಾನೆಯಾಗಿದೆ ಎಂದು ತಿಳಿದು ಬಂದಿದೆ.