ಬೆಂಗಳೂರು: ಮಹಿಳೆಯರ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ ಹಾಸನದ ಮಾಜಿ ಶಾಸಕ ಪ್ರಜ್ವಲ್ ರೇವಣ್ಣ ಸದ್ಯ ಪರಪ್ಪನ ಅಗ್ರಹಾರದಲ್ಲಿದ್ದಾರೆ. ಈ ಪ್ರಕರಣದಿಂದ ತಮ್ಮನ್ನು ಕೈಬಿಡುವಂತೆ ಅವರು ಕೋರ್ಟ್‌ಗೆ ಅರ್ಜಿ ಸಲ್ಲಿಕೆ ಮಾಡಿದ್ದು, ಈ ಅರ್ಜಿಯನ್ನು ವಿಚಾರಣೆ ಮಾಡಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಅರ್ಜಿಯನ್ನು ವಜಾ ಮಾಡಿ ಆದೇಶಿಸಿದೆ. ಹಾಗೆಯೇ ಅತ್ಯಾಚಾರ ಪ್ರಕರಣದ ಮುಂದಿನ ವಿಚಾರಣೆಯನ್ನು ಎಪ್ರಿಲ್ 7 ಕ್ಕೆ ಮುಂದೂಡಿ ಆದೇಶ ಹೊರಡಿಸಿದೆ.