ಮಂಗಳೂರು: ಜಿಲ್ಲಾ ಕಾರಾಗೃಹದಲ್ಲಿ ಅಳವಡಿಸಲಾಗಿರುವ ಜಾಮರ್‌ನಿಂದಾಗಿ ಸಮೀಪವಾಸಿಗಳು, ಸಾರ್ವಜನಿಕರು ಸಮಸ್ಯೆ ಅನುಭವಿಸುವಂತಾಗಿದೆ. ಈ ಹಿನ್ನೆಲೆಯಲ್ಲಿ ಶಾಸಕ ವೇದವ್ಯಾಸ ಕಾಮತ್ ಅವರ ನೇತೃತ್ವದಲ್ಲಿ ಕಾರಾಗೃಹದ ಮುಂಭಾಗದಲ್ಲಿ ಸಾರ್ವಜನಿಕರು ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನಾ ನಿರತರು ಜೈಲಿಗೆ ಮುತ್ತಿಗೆ ಹಾಕಲು ಪ್ರಯತ್ನ ನಡೆಸಿದ್ದಾರೆ. ಈ ಸಂದರ್ಭದಲ್ಲಿ ನಡೆದ ನೂಕುನುಗ್ಗಲಿನಲ್ಲಿ ಪಾಲಿಕೆಯ ನಿಕಟಪೂರ್ವ ಸದಸ್ಯೆ ಲೀಲಾವತಿ ಪ್ರಕಾಶ್ ಅವರು ಬಿದ್ದು ಗಾಯಗೊಂಡಿದ್ದು, ಅವರನ್ನು ಕೆಎಂಸಿ ಆಸ್ಪತ್ರೆ ದಾಖಲಿಸಲಾಗಿದೆ. ಪ್ರತಿಭಟನೆ ನಡೆಸುತ್ತಿದ್ದವರು ಮೊಬೈಲ್‌ಗಳನ್ನು ಒಡೆದು ಹಾಕುವ ಮೂಲಕ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದು, ಇದರಿಂದ ಪರಿಸ್ಥಿತಿ ಹದೆಗೆಟ್ಟಿದೆ. ಪ್ರತಿಭಟನೆ ವಿಕೋಪಕ್ಕೆ ಹೋಗದಂತೆ ಪೊಲೀಸರು ಪ್ರತಿಭಟನಾ ನಿರತರನ್ನು ವಶಕ್ಕೆ ಪಡೆದಿದ್ದಾರೆ. ಕಾರಾಗೃಹದ ಮುಂದೆ ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದಾರೆ.