ಮಡಿಕೇರಿ: ಬಿಜೆಪಿ ಕಾರ್ಯಕರ್ತ ವಿನಯ್ ಸೋಮಣ್ಣ ಆತ್ಮಹತ್ಯೆಗೆ ಸಂಬಂಧಿಸಿದ ಹಾಗೆ ಪ್ರತಿಭಟನೆ ನಡೆಸಲು ಮುಂದಾದ ಬಿಜೆಪಿಯ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಸೇರಿದಂತೆ ಪಕ್ಷದ ಹಲವಾರು ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮೃತ ವಿನಯ್ ಶವವನ್ನು ಕುಶಾಲನಗರದ ಆಸ್ಪತ್ರೆಯಿಂದ ಪೊಲೀಸ್ ಭದ್ರತೆಯಲ್ಲಿ ಅವರ ಹುಟ್ಟೂರಾದ ಗೋಣಿಮರೂರಿನತ್ತ ಕೊಂಡೊಯ್ಯಲು ಸಿದ್ಧತೆ ನಡೆಯುತ್ತಿದ್ದಾಗ ಬಿಜೆಪಿ ನಾಯಕರು, ಕಾರ್ಯಕರ್ತರು ಪ್ರತಿಭಟನೆ ತೀವ್ರಗೊಳಿಸಿದ್ದಾರೆ.
ಪೊಲೀಸರ ಕ್ರಮವನ್ನು ಖಂಡಿಸಿ ಪ್ರತಿಭಟನಾ ನಿರತರಾಗಿದ್ದ ಸಾವಿರಾರು ಕಾರ್ಯಕರ್ತರು ಘೋಷಣೆಗಳನ್ನು ಕೂಗಿದ್ದಾರೆ.
ಕುಶಾಲನಗರ ಠಾಣೆಯ ಮುಂಭಾಗ ಪ್ರತಿಭಟನೆ ನಡೆಸಲು ಸಿದ್ಧವಾಗುತ್ತಿದ್ದ ಬಿಜೆಪಿ ನಾಯಕರಾದ ಬಿ. ವೈ. ವಿಜಯೇಂದ್ರ, ಸಂಸದ ಯದುವೀರ್, ಮಾಜಿ ಸಂಸದ ಪ್ರತಾಪ ಸಿಂಹ ಸೇರಿದಂತೆ ಇನ್ನೂ ಹಲವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.