ಬೆಂಗಳೂರು: ಆನ್‌ಲೈನ್ ಗೇಮಿಂಗ್, ಬೆಟ್ಟಿಂಗ್ ಆ್ಯಪ್‌ಗಳಿಗೆ ಸಂಬಂಧಿಸಿದ ಹಾಗೆ ರಾಜ್ಯದಲ್ಲಿ ಶೀಘ್ರದಲ್ಲೇ ಹೊಸ ಮಾನದಂಡಗಳನ್ನು ಜಾರಿಗೆ ತರಲಾಗುವುದು ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆನ್‌ಲೈನ್ ಗೇಮಿಂಗ್ ಮತ್ತು ಬೆಟ್ಟಿಂಗ್ ಆ್ಯಪ್‌ಗಳ ನಿಯಂತ್ರಣಕ್ಕೆ ಹೊಸ ಕಾನೂನು ರೂಪಿಸುವ ನಿಟ್ಟಿನಲ್ಲಿ ಈಗಾಗಲೇ ಹಲವು ಚರ್ಚೆಗಳು ನಡೆದಿವೆ. ಇವುಗಳಿಂದ ಜನರನ್ನು ರಕ್ಷಿಸುವುದು ಹೇಗೆ ಎನ್ನುವ ನಿಟ್ಟಿನಲ್ಲಿ ಸಾಕಷ್ಟು ಚರ್ಚೆ ನಡೆಸಿರುವುದಾಗಿಯೂ ಅವರು ತಿಳಿಸಿದ್ದಾರೆ. ಹೆಚ್ಚುವರಿ ಕಾಯ್ದೆಗಳನ್ನು ಸೇರಿಸುವ ಬಗೆಗೂ ಚರ್ಚಿಸಲಾಗಿದೆ. ಗೇಮಿಂಗ್ ಇಂಡಸ್ಟ್ರಿ ಮತ್ತು ಸಾರ್ವಜನಿಕರು, ಗೃಹ ಇಲಾಖೆ ಮತ್ತು ಕಾನೂನು ಇಲಾಖೆಯಿಂದ ಸಲಹೆ ಪಡೆದು ಇವೆಲ್ಲವನ್ನೂ ಜಾರಿಗೆ ತರಲಾಗುವುದು ಎಂದು ಅವರು ಹೇಳಿದ್ದಾರೆ.