ಗದಗ: ಅಪ್ರಾಪ್ತ ಮಗಳ ಮೇಲೆ ತಂದೆಯೇ ನಿರಂತರವಾಗಿ ಅತ್ಯಾಚಾರ ನಡೆಸಿದ ಘಟನೆ ಮುಳಗುಂದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
55 ವರ್ಷದ ರಮೇಶ್ ತನ್ನ 16 ವರ್ಷದ ಮಗಳ ಮೇಲೆ ಕಳೆದ ಒಂದು ವರ್ಷದಿಂದ ನಿರಂತರವಾಗಿ ಅತ್ಯಾಚಾರ ಮಾಡುತ್ತಿದ್ದ. ಇದೀಗ ಆರೋಪಿಯ ಮೇಲೆ ಪೋಕ್ಸೋ ಪ್ರಕರಣ ದಾಖಲಾಗಿದೆ.
ಮನೆಯಲ್ಲಿ ಯಾರೂ ಇಲ್ಲದ ವೇಳೆ ಮಗಳ ಮೇಲೆಯೇ ಈತ ಅತ್ಯಾಚಾರ ನಡೆಸುತ್ತಿದ್ದ. ಪರಿಣಾಮ ಬಾಲಕಿ ಗರ್ಭಿಣಿಯಾಗಿದ್ದಳು. ಅತ್ಯಾಚಾರ ನಡೆಸಿದ ಬಳಿಕ ಯಾರಿಗಾದರೂ ಹೇಳಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕುತ್ತಿದ್ದ ಎಂದು ತಿಳಿದು ಬಂದಿದೆ.