ಬೆಂಗಳೂರು: ದುಬೈನಿಂದ ಅಕ್ರಮವಾಗಿ ಚಿನ್ನ ಸಾಗಾಟ ಮಾಡಿದ್ದ ಆರೋಪದಲ್ಲಿ ಜೈಲಿನಲ್ಲಿರುವ ನಟಿ ರನ್ಯಾ ರಾವ್ ಜಾಮೀನು ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ರನ್ಯಾ ರಾವ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮಾಡಿದ ನ್ಯಾ.ಮೂ. ವಿಶ್ವಜಿತ್ ಶೆಟ್ಟಿ ಅವರಿದ್ದ ನ್ಯಾಯ ಪೀಠ ಇದಕ್ಕೆ ಆಕ್ಷೇಪಣೆ ಸಲ್ಲಿಸಲು ಡಿಆರ್‌ಐ ಗೆ ನೊಟೀಸ್ ಜಾರಿ ಮಾಡಿದ್ದು, ಮುಂದಿನ ವಿಚಾರಣೆಯನ್ನು ಎ. 17 ಕ್ಕೆ ಮುಂದೂಡಿದೆ.