ಹುಬ್ಬಳ್ಳಿ: ನಗರದಲ್ಲಿ ವಿವಾದಾತ್ಮಕ ಭಾಷಣ ಮಾಡಿರುವ ಆರೋಪದಲ್ಲಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ವಿರುದ್ಧ ನಗರದ ಗೋಳಗುಮ್ಮಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಎ. 7 ರಂದು ನಡೆದ ರಾಮನವಮಿ ಕಾರ್ಯಕ್ರಮದಲ್ಲಿ ಯತ್ನಾಳ್ ಮಾತನಾಡಿದ್ದು, ಈ ವೇಳೆ ದಿ. ಬಾಳಾಸಾಹೇಬ್ ಠಾಕ್ರೆ ಅವರ ಮನೆಯಲ್ಲಿ ಮಹಮ್ಮದ್ ಪೈಗಂಬರ್ ಹುಟ್ಟಿರುವುದಾಗಿ ಹೇಳಿದ್ದರು. ಈ ಹೇಳಿಕೆ ಅಪಮಾನಕಾರಿಯಾಗಿದೆ ಎಂದು ದೂರಿನಲ್ಲಿ ಹೇಳಲಾಗಿದೆ.