ಬೆಂಗಳೂರು: ಯುವಕ ಮತ್ತು ಯುವತಿ ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದಲ್ಲಿ ಅಶ್ಲೀಲವಾಗಿ ನಡೆದುಕೊಂಡು ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಈ ಜೋಡಿಯ ಆಶ್ಲೀಲ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಇದನ್ನು ಗಮನಿಸಿರುವ ಸಾರ್ವಜನಿಕರು ಬೆಂಗಳೂರು ಮೆಟ್ರೋ ದೆಹಲಿ ಮೆಟ್ರೋ ಆಗುತ್ತಿದೆಯೇ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಯುವಕ ಮತ್ತು ಯುವತಿ ಮೆಟ್ರೋ ನಿಲುಗಡೆಯ ಪ್ಲ್ಯಾಟ್ಫಾರ್ಮ್‌ನಲ್ಲಿ ನಿಂತಿದ್ದು, ಯುವಕ ಯುವತಿಯ ಖಾಸಗಿ ಭಾಗಗಳನ್ನು ಮುಚ್ಚುವ ಮೂಲಕ ಅಸಭ್ಯವಾಗಿ ನಡೆದುಕೊಂಡಿದ್ದಾರೆ. ಇದನ್ನು ಯಾರೋ ಮೊಬೈಲ್ ನಲ್ಲಿ ಸೆರೆ ಹಿಡಿದು ವೈರಲ್ ಮಾಡಿದ್ದರು. ಈ ಘಟನೆಯ ಬಳಿಕ ಎಚ್ಚೆತ್ತುಕೊಂಡಿರುವ ಬೆಂಗಳೂರು ಮೆಟ್ರೋ ಸಿಬ್ಬಂದಿ ಸಿಸಿ ಟಿವಿ ದೃಶ್ಯಾವಳಿಗಳನ್ನು ಸಂಗ್ರಹಿಸಿ ಈ ಜೋಡಿಗಳ ಪತ್ತೆಗೆ ಮುಂದಾಗಿದ್ದಾರೆ.