ಮಡಿಕೇರಿ: ಚಾಲಕನ ನಿಯಂತ್ರಣ ತಪ್ಪಿ ಕಾ ಕೊಂದು ದೇವರಕೊಲ್ಲಿ ಎಂಬಲ್ಲಿ ಪಲ್ಟಿಯಾಗಿದ್ದು, ಈ ಸಂದರ್ಭದಲ್ಲಿ ಕಾರನ್ನು ಎತ್ತಲು ಸಹಾಯ ಮಾಡಲು ಹೋದವರಿಗೆ ಕಾರಿನಲ್ಲಿ ಗಾಂಜಾ ಪ್ಯಾಕೆಟ್ ಸಿಕ್ಕಿದ ಘಟನೆ ನಡೆದಿದೆ.
ಪಿರಿಯಾಪಟ್ಟಣದಿಂದ ಮಡಿಕೇರಿ ಮಾರ್ಗವಾಗಿ ಪುತ್ತೂರಿಗೆ ಈ ಕಾರ್ ಬರುತ್ತಿದ್ದು, ದಾರಿ ಮಧ್ಯೆ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಈ ಸಂದರ್ಭದಲ್ಲಿ ಅಲ್ಲಿನ ಸ್ಥಳೀಯರು ಕಾರಿನಲ್ಲಿದ್ದವರಿಗೆ ಚರಂಡಿಗೆ ಬಿದ್ದ ಕಾರನ್ನೆತ್ತಲು ಸಹಾಯ ಮಾಡಲು ಬಂದಿದ್ದಾರೆ. ಆಗ ಕಾರಿನಲ್ಲಿ ಗಾಂಜಾ ಪ್ಯಾಕೆಟ್ ಇರುವುದು ತಿಳಿದು ಬಂದಿದೆ. ತಕ್ಷಣವೇ ಇವರು ಮಡಿಕೇರಿ ಗ್ರಾಮಾಂತರ ಪೊಲೀಸರಿಗೆ ಈ ಬಗ್ಗೆ ಮಾಹಿತಿ ನೀಡಿದ್ದಾರೆ.
ಸ್ಥಳಕ್ಕಾಗಮಿಸಿದ ಪೊಲೀಸರು ಆರೋಪಿಗಳಾದ ಪುತ್ತೂರು ಮೂಲದ ಫಜ್ಜುದ್ದೀನ್, ಮುಷ್ಕಾಕ್, ಜಾಬಿರ್ ಎಂಬವರನ್ನು ಬಂಧಿಸಿ, ಗಾಂಜಾ ಪ್ಯಾಕೆಟ್‌ಗಳನ್ನು ವಶಕ್ಕೆ ಪಡೆದಿದ್ದಾರೆ.