ಮಂಗಳೂರು; ನಗರದ ನ್ಯಾಯಲಯಕ್ಕೆ ಭಯೋತ್ಪಾದಕ ಮಹಮ್ಮದ್ ಅಕ್ಬರ್ ಇಸ್ಮಾಯಿಲ್ ಚೌಧರಿಯನ್ನು ಇಂದು ಬೆಳ್ಳಿಗ್ಗೆ ಸ್ಥಳೀಯ ಪೊಲೀಸರ ನೇತೃತ್ವದಲ್ಲಿ ತೆಲಂಗಾಣ ಪೊಲೀಸರು ಹಾಜರು ಪಡಿಸಿದ್ದಾರೆ.
2008 ರಲ್ಲಿ ದಕ್ಷಿಣ ಕನ್ನಡದಲ್ಲಿ ನಡೆದ ಇಂಡಿಯನ್ ಮುಜಾಹಿದ್ದೀನ್ ಸಂಬಂಧಿಸಿದ ಉಗ್ರ ಸಂಘಟನೆಯ ಅಧೀನದಲ್ಲಿ ಉಗ್ರ ಚಟುವಟಿಕೆ ನಡೆಸಿದ ಆರೋಪದ ಹಿನ್ನಲೆಯಲ್ಲಿ ರಾಷ್ಟ್ರೀಯ ತನಿಖಾ ತಂಡ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ ದೇಶ ವಿರೋಧಿ ಗಂಭೀರ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪದ ಹಿನ್ನೆಲೆ ಬಂಧಿಸಲಾಗಿತ್ತು