ಮಂಗಳೂರು; ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಕೆಲ ತಿಂಗಳ ಹಿಂದೆ ನಡೆದ ಅಧಿಕಾರಿಗಳ ಬದಲಾವಣೆ ಫಲ ನೀಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಇಂದು ಪುತ್ತೂರಿನಲ್ಲಿ ನಡೆದ ಅಶೋಕ ಜನಮನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಿನನಿತ್ಯ ಗಲಾಟೆ ಗೊಂದಲಗಳ ವಾತಾವರಣ ಸೃಷ್ಟಿಯಾಗಿತ್ತು. ಈ ಸಮಯ ನಾನು ಯಾರ ಮಾತನ್ನು ಕೇಳದೆ ದಕ್ಷಿಣ ಕನ್ನಡ ಜಿಲ್ಲೆಯ ಅಧಿಕಾರಿಗಳನ್ನು ಅದರಲ್ಲೂ ಪೊಲೀಸ್ ಅಧಿಕಾರಿಗಳನ್ನು ಮಂಗಳೂರು ನಗರದ ಪೊಲೀಸ್ ಕಮಿಷನರ್ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿಯವರ ಬದಲಾವಣೆಯಿಂದ ಜಿಲ್ಲೆಯಲ್ಲಿ ಇಂದು ಶಾಂತಿ ನೆಲೆಸಿದೆ. ಈ ಮೂಲಕ ದಕ್ಷ ಅಧಿಕಾರಿಗಳು ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸಿದರೆ, ಶಾಂತಿ ನೆಲೆಸಲು ಸಾಧ್ಯ ಎಂದು ಸಾಬೀತಾಗಿದೆ ಎಂದು ಹೇಳಿದರು. ಜಿಲ್ಲೆಯ ಜನರು ಅಭಿವೃದ್ಧಿಯ ಕಡೆಗೆ ಹೆಚ್ಚಿನ ಗಮನ ಕೊಡಬೇಕು. ಇತಂಹ ಗಲಾಟೆಗಳು ಆದರೆ ಶ್ರೀಮಂತರ ಮಕ್ಕಳು ಭಾಗಿಯಾಗುವುದಿಲ್ಲ ಕೇವಲ ಬಡಜನರ ಮಕ್ಕಳು ಬಲಿ ಆಗುತ್ತಿರುವುದು ಕಂಡು ಬಂದಿದೆ ಇದನ್ನು ಜನರು ಗಮನಿಸುವ ಅಗತ್ಯವಿದೆ ಎಂದರು.


















