ಮಂಗಳೂರು: ಕಳೆದ 36 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಚಾರ್ಮಾಡಿ ನಿವಾಸಿಯಾದ ರವೀಂದ್ರ ಎಂಬಾತನು ಹಲವು ವರ್ಷಗಳಿಂದ ಪೊಲೀಸರ ಕೈಗೆ ಸಿಗದೆ ತಲೆಮರೆಸಿಕೊಂಡಿದ್ದನು.
ಖಚಿತ ಮಾಹಿತಿಯ ಆಧಾರದಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು ಕಾರ್ಕಳ ತಾಲೂಕು ನಲ್ಲೂರು ಎಂಬ ಸ್ಥಳದಲ್ಲಿ ಆರೋಪಿಯನ್ನು ದಸ್ತಗಿರಿ ಮಾಡಿದ್ದಾರೆ. ಬಂಧಿತ ಆರೋಪಿಯನ್ನು ದಿನಾಂಕ 06 ರಂದು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿ, ಮಾನ್ಯ ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.



















