ಮಂಗಳೂರು: ಪ್ರವಾಸೋದ್ಯಮ ಇಲಾಖೆ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲಾಡಳಿತ ವತಿಯಿಂದ ಆಯೋಜಿಸಲಾದ ‘ಕರಾವಳಿ ಕರ್ನಾಟಕ ಪ್ರವಾಸೋದ್ಯಮ ಸಮಾವೇಶ 2026’ನ್ನು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಗರದ ಖಾಸಗಿ ಹೊಟೇಲ್ ನಲ್ಲಿ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು, ಕರಾವಳಿ ಜ್ಞಾನ ಸಂಪತ್ತಿನ ಪರ್ವತ, ದೈವ ದೇವರ ಶಕ್ತಿಕೇಂದ್ರ, ವ್ಯಾಪಾರಿಗಳ ನಿಧಿ, ಪ್ರವಾಸಿಗರ ಸ್ವರ್ಗ, ವಿಶೇಷ ಕಲೆ-ಸಂಸ್ಕೃತಿಗಳ ತವರೂರು ಆದರೂ ಪ್ರವಾಸೋದ್ಯಮದಲ್ಲಿ ಹಿಂದೆ ಉಳಿದಿದೆ. ಹಾಗಾಗಿ ಕರಾವಳಿಗೆ ಪ್ರತ್ಯೇಕ ಪ್ರವಾಸೋದ್ಯಮ ನೀತಿಯ ಅಗತ್ಯವಿದೆ. ಈಗಾಗಲೇ ರಾಜ್ಯ ಪ್ರವಾಸೋದ್ಯಮ ನೀತಿಯನ್ನು ಸಿದ್ಧಪಡಿಸಲಾಗಿದ್ದು, ಕರಾವಳಿಯ ಕುರಿತ ಚರ್ಚಸಿದ ಬಳಿಕ ಅದನ್ನು ಅಂತಿಮ ಪಡಿಸಲು ಉದ್ದೇಶಿಸಲಾಗಿದೆ. ಈ ನಿಟ್ಟಿನಲ್ಲಿ ಕರಾವಳಿಯಲ್ಲಿ ಮೊದಲ ಹಂತದ ಸಭೆ ಆಯೋಜಿಸಲಾಗಿದೆ ಎಂದರು


















