ಮಂಗಳೂರು; ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕುವೆಟ್ಟು ಗ್ರಾಮದ ಸುಮಂತ್ ಎಂಬ ಬಾಲಕನ ಅನುಮಾನಾಸ್ಪದ ಸಾವಿನ ಪ್ರಕರಣಕ್ಕೆ ಸಂಬಂಧಿಸಿ ತೀವ್ರ ಚರ್ಚೆ ಉಂಟಾಗಿದೆ. ಈ ಪ್ರಕರಣದ ಕುರಿತು ಸತ್ಯಾಸತ್ಯತೆ ಹೊರಬರಬೇಕೆಂಬ ಉದ್ದೇಶದಿಂದ, ಪ್ರಕರಣವನ್ನು ಅತ್ಯಂತ ಕೂಲಂಕುಷವಾಗಿ ತನಿಖೆ ನಡೆಸಬೇಕೆಂದು ಮಾನ್ಯ ಗೃಹ ಸಚಿವರನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ಆಗ್ರಹಿಸಿದ್ಧಾರೆ.
ಸುಮಂತ್‌ನ ಸಾವಿನ ಬಗ್ಗೆ ಹಲವು ಅನುಮಾನಗಳು ವ್ಯಕ್ತವಾಗುತ್ತಿದ್ದು, ಕುಟುಂಬಸ್ಥರು ಹಾಗೂ ಸ್ಥಳೀಯ ಸಾರ್ವಜನಿಕರು ನ್ಯಾಯಕ್ಕಾಗಿ ಆಗ್ರಹಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಯಾವುದೇ ರೀತಿಯ ಲೋಪದೋಷಗಳು ನಡೆಯದಂತೆ, ಎಲ್ಲಾ ಆಯಾಮಗಳಿಂದ ತನಿಖೆ ನಡೆಸಿ ಶೀಘ್ರದಲ್ಲೇ ನಿಖರವಾದ ಸತ್ಯವನ್ನು ಜನರ ಮುಂದಿಡಬೇಕು ಎಂದು ಒತ್ತಾಯಿಸಲಾಗಿದೆ.
ಈ ಪ್ರಕರಣದಲ್ಲಿ ತಪ್ಪಿತಸ್ಥರು ಯಾರೇ ಆಗಿರಲಿ, ಅವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂಬುದು ಸಾರ್ವಜನಿಕರ ಒತ್ತಾಯವಾಗಿದೆ. ಪೊಲೀಸ್ ಇಲಾಖೆ ನಿರಪೇಕ್ಷ ಹಾಗೂ ಪಾರದರ್ಶಕ ತನಿಖೆ ನಡೆಸಬೇಕೆಂಬ ನಿರೀಕ್ಷೆ ವ್ಯಕ್ತವಾಗಿದೆ. ಈಗಾಗಲೇ ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿ ಅವರ ಮಾರ್ಗದರ್ಶನದ ಪೊಲೀಸರ ತಂಡಗಳು ಎಲ್ಲಾ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ.
















