ಮಂಗಳೂರು: ಮುಂದಿನ ಮೂರು ಗಂಟೆಗಳಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಸೇರಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತದ ಹವಾಮಾನ ಇಲಾಖೆ ಕಟ್ಟೆಚ್ಚರ ನೀಡಿದೆ. ಭಾರತದ ಹವಾಮಾನ ಇಲಾಖೆ(IMD) ಇಂದು ಏಳು ಗಂಟೆಗೆ ಹೊರಡಿಸಿದ ಪ್ರಕಟಣೆಯಲ್ಲಿ ಈ ಎಚ್ಚರಿಕೆ ನೀಡಿದೆ. ಐಎಂಡಿ ಪ್ರಕಾರ ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಕ್ಷಿಣ ಕನ್ನಡ, ದಾವಣಗೆರೆ, ಕೋಲಾರ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಮಿಂಚು ಸಹಿತ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಿದೆ.