ಮಂಗಳೂರು: 13 ವರ್ಷದ ಬಾಲಕಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಪಣಂಬೂರು ಠಾಣಾ ವ್ಯಾಪ್ತಿಯ ಜೋಕಟ್ಟೆ ಬಳಿ ನಡೆದಿದೆ. ಮೂಲತಃ ಬೆಳಗಾವಿ ಜಿಲ್ಲೆಯವರಾಗಿದ್ದು ಇಂದು ಬೆಳ್ಳಗೆ 11 ಗಂಟೆಯ ಸುಮಾರಿಗೆ ಬಾಲಕಿಯ ಹತ್ಯೆ ನಡೆದಿದೆ ಎನ್ನಲಾಗಿದೆ. ಈ ಬಗ್ಗೆ ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.