ಮಂಗಳೂರು: ಜಗತ್ ಪ್ರಸಿದ್ಧ ತಿರುಪತಿ ತಿಮ್ಮಪ್ಪ ದೇವರ ಲಡ್ಡು ಪ್ರಸಾದಕ್ಕೆ ಪ್ರಾಣಿ ಜನ್ಯ ಹಂದಿ, ದನ, ಮೀನಿನ ಕೊಬ್ಬು ಬಳಕೆ ಮಾಡಿರುವುದರಿಂದ ಎಚ್ಚೆತ್ತ ಕರ್ನಾಟಕ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಕರ್ನಾಟಕ ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ಅಧಿಸೂಚಿತ ದೇವಾಲಯಗಳಲ್ಲಿ ಸೇವೆಗಳಿಗೆ ಶುದ್ಧ ನಂದಿನಿ ತುಪ್ಪವನ್ನು ಮಾತ್ರ ಬಳಕೆ ಮಾಡುವಂತೆ ಮಹತ್ವದ ಆದೇಶ ಹೊರಡಿಸಿದೆ.
ಕರ್ನಾಟಕ ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯಡಿ ಬರುವ ಎಲ್ಲಾ ಅಧಿಸೂಚಿತ ದೇವಾಲಯಗಳಲ್ಲಿ ಸೇವೆಗಳಿಗೆ, ದೀಪಗಳಿಗೆ ಹಾಗೂ ಎಲ್ಲಾ ವಿಧದ ಪ್ರಸಾದ ತಯಾರಿಕೆಗೆ ಹಾಗೂ ದಾಸೋಹ ಭವನದಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪವನ್ನು ಮಾತ್ರ ಬಳಸುವಂತೆ ಸೂಚಿಸಿದೆ. ದೇವಾಲಯಗಳಲ್ಲಿ ತಯಾರಿಸಲಾಗುವ ಪ್ರಸಾದಗಳಲ್ಲಿ ಗುಣಮಟ್ಟವಮನ್ನು ಕಾಯ್ದುಕೊಳ್ಳುವಂತೆ ಸೂಚಿಸಿ ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತರು ಸುತ್ತೋಲೆ ಹೊರಡಿಸಿದ್ದಾರೆ.