ಬೆಂಗಳೂರು: ಮರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ಹೈದರ್ ಆಲಿಯನ್ನು ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ 4 ಜನರನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
ಹಳೆಯ ದ್ವೇಷದಿಂದ ವಿರೋಧಿ ತಂಡ ಈ ಹತ್ಯೆ ನಡೆಸಿರಬಹುದು ಎಂದು ಅಂದಾಜಿಸಲಾಗಿದೆ.
ಇನ್ನೂ ಕೆಲ ಮೂಲಗಳ ಪ್ರಕಾರ ಮುಂದಿನ ಬಿಬಿಎಂಪಿ ಚುನಾವಣೆಯಲ್ಲಿ ಒಂದು ಕ್ಷೇತ್ರದಿಂದ ಸ್ಪರ್ಧಿಸಲು ಹೈದರ್‌ಗೆ ಆಫರ್ ಬಂದಿದ್ದು, ಆತ ಅದೇ ಕ್ಷೇತ್ರದಲ್ಲಿ ಓಡಾಟ ನಡೆಸುತ್ತಿದ್ದ. ಇದು ಸಹ ಆತನ ಹತ್ಯೆಗೆ ಕಾರಣವಾಗಿರಬಹುದು ಎಂದು ಹೇಳಲಾಗುತ್ತಿದೆ.
ಕಳೆದ ಶುಕ್ರವಾರ ಬೈಕ್‌ನಲ್ಲಿ ಬರುತ್ತಿದ್ದ ಹೈದರ್‌ನನ್ನು ಹತ್ತಕ್ಕೂ ಹೆಚ್ಚು ಜನರ ತಂಡ ಅಡ್ಡಗಟ್ಟಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದರು.