ಹಾಸನ: ಲಾರಿ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಚ ಘಟನೆ ಸಕಲೇಶಪುರದ ಹೊಸ ಬಸ್ ನಿಲ್ದಾಣದ ಸಮೀಪ ನಡೆದಿದೆ.
ಆಕಾಶ್(22), ಶಂಕರ(45) ಎಂಬವರೇ ಮೃತ ದುರ್ದೈವಿಗಳು.
ಜಾತ್ರೆ ಮುಗಿಸಿಕೊಂಡು ಬೈಕಿನಲ್ಲಿ ಬುಧವಾರ ರಾತ್ರಿ ಹಿಂದುರುಗುತ್ತಿದ್ದ ಸಮಯದಲ್ಲಿ ಲಾರಿ ಢಿಕ್ಕಿ ಹೊಡೆದಿದೆ. ಘಟನೆಯಲ್ಲಿ ಗಂಭೀರ ಗಾಯಗೊಂಡ ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.