ದಾವಣಗೆರೆ: ಪಾಳು ಬಾವಿಗೆ ಆಕಸ್ಮಿಕವಾಗಿ ಬಿದ್ದ ವ್ಯಕ್ತಿಯನ್ನು ಅಗ್ನಿಶಾಮಕ ಸಿಬ್ಬಂದಿ ರಕ್ಷಣೆ ಮಾಡಿದ ಘಟನೆ ಜಮ್ಮಾಪುರದಲ್ಲಿ ನಡೆದಿದೆ.
ಕುಮಾರ್ ಎಂಬವರು ನಡೆದುಕೊಂಡು ತಮ್ಮ ಸ್ವಗ್ರಾಮಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಪಾಳು ಬಾವಿಯೊಂದಕ್ಕೆ ಬಿದ್ದು ನರಳುತ್ತಿದ್ದರು. ಈ ಬಗ್ಗೆ ಮಾಹಿತಿ ಪಡೆದ ಅಗ್ನಿಶಾಮಕ ಸಿಬ್ಬಂದಿ ಮತ್ತು ತುರ್ತು ಸೇವಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಕಾರ್ಯಾಚರಣೆ ನಡೆಸಿ, ಅವರನ್ನು ರಕ್ಷಣೆ ಮಾಡಿದ್ದಾರೆ.
ಕುಮಾರ್ ಅವರ ಸೊಂಟಕ್ಕೆ, ಬೆನ್ನುಮೂಳೆಗೆ ಬಲವಾಗಿ ಏಟು ಬಿದ್ದಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.