ಚಿಕ್ಕಮಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಅವರ ಬೆಂಗಾವಲು ವಾಹನಕ್ಕೆ ಲಾರಿಯೊಂದು ಢಿಕ್ಕಿ ಹೊಡೆದ ಘಟನೆ ನಗರದ ಲಕ್ಯಾ ಕ್ರಾಸ್ ಬಳಿ ನಡೆದಿದೆ.
ವಿಜಯೇಂದ್ರ ಅವರ ಕಾರಿನ ಹಿಂಬದಿಯಲ್ಲಿ ಚಲಿಸುತ್ತಿದ್ದ ಬೆಂಗಾವಲು ವಾಹನಕ್ಕೆ ಲಾರಿ ಗುದ್ದಿದೆ. ಪರಿಣಾಮ ಕಾರಿನ ಮುಂಭಾಗ ಜಖಂಗೊಂಡಿದ್ದು ಅದೃಷ್ಟವಶಾತ್ ಕಾರು ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ.
ನಗರದ ಬಸವತತ್ವ ಪೀಠದಲ್ಲಿ ನಡೆದ ಸಮಾವೇಶವೊಂದರಲ್ಲಿ ಭಾಗವಹಿಸಿ ವಿಜಯೇಂದ್ರ ಅವರು ಶಿವಮೊಗ್ಗಕ್ಕೆ ಮರಳುತ್ತಿದ್ದಾಗ ಈ ದುರಂತ ಸಂಭವಿಸಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ, ಲಾರಿ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ.