ಕಾರ್ಕಳ: ಅನಾರೋಗ್ಯದ ಕಾರಣದಿಂದ ಜೀವನದಲ್ಲಿ ಬೇಸತ್ತು ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಮುಡಾರು ಎಂಬಲ್ಲಿ ನಡೆದಿದೆ.
ವಿನೋದ(46) ಎಂಬವರೇ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಕಳೆದ ಆರು ತಿಂಗಳಿನಿಂದ ಇವರು ಗರ್ಭಕೋಶದ ಸಮಸ್ಯೆಯಿಂದ ಕಂಗೆಟ್ಟಿದ್ದರು. ಇದೇ ವಿಷಯಕ್ಕೆ ಬೇಸತ್ತು ಫೆ. 27 ರಂದು ಮನೆಯ ಮಾಡಿಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿದೆ. ಈ ಸಂಬಂಧ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.