ನಿಟ್ಟೆ: ಮನೆಯೊಂದರ ಬಾಗಿಲಿನ ಬೀಗ ಮುರಿದು ಚಿನ್ನಾಭರಣ ದೋಚಿದ ಘಟನೆ ಕಾರ್ಕಳದ ನಿಟ್ಟೆ ಗ್ರಾಮದಲ್ಲಿ ನಡೆದಿದೆ.
ನಿಟ್ಟೆಯ ಸಂಪರ್ಕ ಎನ್ನುವವರ ಮನೆಯ ಬಾಗಿಲಿಗೆ ಹಾಕಲಾಗಿದ್ದ ಬೀಗವನ್ನು ಮುರಿದು ಒಳ ಪ್ರವೇಶಿಸಿರುವ ಕಳ್ಳರು 79 ಗ್ರಾಂ. ಗಳಷ್ಟು ಚಿನ್ನಾಭರಣ ಕಳವು ಮಾಡಿರುವುದಾಗಿದೆ. ಕೋಣೆಯೊಂದರ ಕಪಾಟಿನಲ್ಲಿ ಇರಿಸಲಾಗಿದ್ದ ಚಿನ್ನಾಭರಣ ಕಳ್ಳರ ಪಾಲಾಗಿದೆ.
ಕಾರ್ಕಳ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.