ಕೊಳ್ಳೇಗಾಲ: ಕಾರು ಮತ್ತು ಟಿಪ್ಪರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಮಲೆಮಹದೇಶ್ವರ ಬೆಟ್ಟಕ್ಕೆ ಹೋಗುತ್ತಿದ್ದ ಐದು ಜನರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಕಾರಿನಲ್ಲಿ ತೆರಳುತ್ತಿದ್ದವರು ಕೊಳ್ಳೇಗಾಲ, ಮಂಡ್ಯಕ್ಕೆ ಸೇರಿದವರಾಗಿದ್ದು ಮಲೆ ಮಹದೇಶ್ವರ ಬೆಟ್ಟಕ್ಕೆ ಹೋಗುತ್ತಿದ್ದರು. ಈ ವೇಳೆ ಎದುರಿನಿಂದ ಬಂದ ಟಿಪ್ಪರ್ ಢಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿ, ಮೃತದೇಹಗಳನ್ನು ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ. ಘಟನೆಗೆ ಸಂಬಂಧಿಸಿದ ಹಾಗೆ ಹೆಚ್ಚಿನ ವಿವರಗಳು ಇನ್ನಷ್ಟೇ ತಿಳಿದು ಬರಬೇಕಾಗಿದೆ.