ಕಟಪಾಡಿ: ಅಪರಿಚಿತ ವಾಹನವೊಂದು ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಕಟಪಾಡಿ – ಶಿರ್ವ ರಾಜ್ಯ ಹೆದ್ದಾರಿಯ ಪ್ರಿನ್ಸ್ ಪಾಯಿಂಟ್ ಬಳಿ ನಡೆದಿದೆ.
ಮೃತರನ್ನು ಇಂದ್ರಪುರ ನಿವಾಸಿ ವಿಜಯ ಶೆಟ್ಟಿ( 55) ಎಂದು ಗುರುತಿಸಲಾಗಿದೆ. ಬೆಳ್ಮಣ್ಣಿನ ವೈನ್‌ಶಾಪ್ ಒಂದರಲ್ಲಿ ಇವರು ಕೆಲಸ ಮಾಡುತ್ತಿದ್ದು ಮಧ್ಯಾಹ್ನದ ವೇಳೆ ಊಟ ಮಾಡಲು ಮನೆಗೆ ಹೋಗುತ್ತಿದ್ದಾಗ ಈ ದುರಂತ ಸಂಭವಿಸಿದೆ.
ಇವರ ಬೈಕ್‌ಗೆ ಅಪರಿಚಿತ ವಾಹನ ಗುದ್ದಿದ ಪರಿಣಾಮ ರಸ್ತೆಗೆ ಎಸೆಯಲ್ಪಟ್ಟು ತಲೆಗೆ ಗಂಭೀರ ಪ್ರಮಾಣದ ಗಾಯಗಳಾಗಿವೆ. ಅವರನ್ನು ಉಡುಪಿಯ ಆಸ್ಪತ್ರೆಗೆ ಕೊಂಡೊಯ್ಯುವ ವೇಳೆ ಮಾರ್ಗ ಮಧ್ಯೆಯೇ ಅವರು ಸಾವನ್ನಪ್ಪಿದ್ದಾರೆ. ಬೈಕ್‌ಗೆ ಗುದ್ದಿದ ವಾಹನ ಪರಾರಿಯಾಗಿದೆ.
ಶಿರ್ವ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.