ವಿಜಯಪುರ: ಬಾವಿಯೊಂದರಲ್ಲಿ ಯುವಕನೋರ್ವನ ಶವ ಪತ್ತೆಯಾದ ಘಟನೆ ಇಂಡಿ ತಾಲೂಕಿನ ಲೋಣಿ ಬಿಕೆ ಗ್ರಾಮದಲ್ಲಿ ನಡೆದಿದೆ.
ಮೃತ ಯುವಕನನ್ನು ಶರಣಗೌಡ ಚನಗೊಂಡಪ್ಪ ಪಾಟೀಲ(25) ಎಂದು ಗುರುತಿಸಲಾಗಿದೆ.
ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ಈತನನ್ನು ಕೊಲೆ ಮಾಡಿ ಬಾವಿಗೆ ಎಸೆದಿರುವ ಶಂಕೆ ಇದೆ. ಝಳಕಿ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಮಾಡುತ್ತಿದ್ದಾರೆ.