ಹಾವೇರಿ ಜಿಲ್ಲಾ ಕಾರಾಗೃಹದಲ್ಲಿ ಘಟನೆ
ಹಾವೇರಿ: ವಿಚಾರಣಾಧೀನ ಕೈದಿಯೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಜಿಲ್ಲಾ ಕಾರಾಗೃಹ ಹಾವೇರಿಯಲ್ಲಿ ನಡೆದಿದೆ.
ಕೊಲೆ ಪ್ರಕರಣವೊಂದಕ್ಕೆ ಸಂಬಂಧಿಸಿದ ಹಾಗೆ ಬಂಧಿತನಾಗಿದ್ದು, ವಿಚಾರಣಾಧೀನ ಕೈದಿಯಾಗಿದ್ದ ಕೋಟ್ಯಪ್ಪ ಅಂಬಿಗೇರ ಎಂಬಾತ ನೇಣಿಗೆ ಶರಣಾದ ವ್ಯಕ್ತಿ.
ಮೃತ ಆರೋಪಿ ಅನೈತಿಕ ಸಂಬಂಧದ ವಿಚಾರದಲ್ಲಿ ಸವಣೂರು ತಾಲೂಕಿನ ಹತ್ತಿಮತ್ತೂರಿನಲ್ಲಿ ಇಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿದ ಆರೋಪ ಹೊತ್ತಿದ್ದ ಎನ್ನಲಾಗಿದೆ.
ಈತನ ಶವ ಜಿಲ್ಲಾ ಕಾರಾಗೃಹದ ಸ್ಟೋರ್ ರೂಂನಲ್ಲಿ ನೇಣು ಬಿಗಿದ ರೀತಿಯಲ್ಲಿ ಪತ್ತೆಯಾಗಿದ್ದು, ಮೃತ ದೇಹವನ್ನು ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದೆ.