ಮುಧೋಳ: ಪರೀಕ್ಷೆಯಲ್ಲಿ ಕಾಪಿ ಹೊಡೆಯಲು ಹೋಗಿ ಸಿಕ್ಕಿಬಿದ್ದು, ಕಾಲೇಜು ಸಿಬ್ಬಂದಿ ಬೈದರೆಂದು ಕೆರೆಗೆ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹಿರೇಕೆರಿಗಲ್ಲಿಯಲ್ಲಿ ನಡೆದಿದೆ.
ಮೃತ ದುರ್ದೈವಿಯನ್ನು ತೇಜಸ್ವಿನಿ ದೊಡ್ಡಮನಿ (16) ಎಂದು ಗುರುತಿಸಲಾಗಿದೆ.
ಖಾಸಗಿ ಕಾಲೇಜಿನ ವಿದ್ಯಾರ್ಥಿನಿಯಾಗಿದ್ದ ಈಕೆ ಪರೀಕ್ಷೆಯಲ್ಲಿ ನಕಲು ಮಾಡಿ ಸಿಕ್ಕಿಬಿದ್ದಿದ್ದಳು. ಇದನ್ನು ಗಮನಿಸಿದ ಕಾಲೇಜಿನ ಆಡಳಿತ ಮಂಡಳಿ ಆಕೆಯ ಪೋಷಕರನ್ನು ಕರೆಯಿಸಿ, ಅವರ ಎದುರಲ್ಲಿ ಆಕೆಗೆ ಬುದ್ಧಿವಾದ ಹೇಳಿದ್ದರು. ಇದರಿಂದ ಮಾನಸಿಕವಾಗಿ ನೊಂದ ಆಕೆ ಮಹಾರಾಣಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆೆ.
ಮೃತ ವಿದ್ಯಾರ್ಥಿನಿಯ ಪೋಷಕರು ಕಾಲೇಜು ಆಡಳಿತ ಮಂಡಳಿಯ ವಿರುದ್ಧ ಪೊಲೀಸರಿಗೆ ದೂರು ದಾಖಲಿಸಿದ್ದಾರೆ.