ಬೆಂಗಳೂರು: ರಿಯಲ್ ಎಸ್ಟೇಟ್ ಉದ್ಯಮಿ ಕಿಡ್ನ್ಯಾಪ್‌ಗೆ ಸಂಬಂಧಿಸಿದ ಹಾಗೆ ಸಚಿವ ಸತೀಶ್ ಜಾರಕಿಹೊಳಿ ಅವರ ಆಪ್ತೆ, ಗೋಕಾಕ್‌ನ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಮಂಜುಳಾ ರಾಮನಗಟ್ಟಿ ಎಂಬವರನ್ನು ಘಟಪ್ರಭಾ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದ ಹಾಗೆ ಈಗಾಗಲೇ ಆರು ಮಂದಿ ಆರೋಪಿಗಳನ್ನು ಬಂಧಿಸಿದ್ದು, ಈಗ ಏಳನೇ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿಗಳು ರಿಯಲ್ ಎಸ್ಟೇಟ್ ಉದ್ಯಮಿಯನ್ನು ಅಪಹರಿಸಿ ಐದು ಕೋಟಿ ರೂ. ಗಳಿಗೆ ಬೇಡಿಕೆ ಇರಿಸಿದ್ದರು.
ಘಟಪ್ರಭಾ ಪೊಲೀಸರು ಈ ಪ್ರಕರಣವನ್ನು ಕೇವಲ 24 ಗಂಟೆಗಳಲ್ಲೇ ಬೇಧಿಸಿದ್ದು ಅಪಹರಣಕ್ಕೆ ಒಳಗಾದ ಉದ್ಯಮಿಯನ್ನು ರಕ್ಷಣೆ ಮಾಡಿದ್ದಾರೆ.