ಸುಳ್ಯ: ನಿಂತಿದ್ದ ಟೆಂಪೋ ಒಂದಕ್ಕೆ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಮೂವರು ಗಾಯಗೊಂಡ ಘಟನೆ ಮಾಣಿ – ಮೈಸೂರು ರಾಷ್ಟ್ರೀಯ ಹೆದ್ದಾರಿಯ ಪೆರಾಜೆಯ ಕಲ್ಲರ್ಪೆ ಸಮೀಪ ನಡೆದಿದೆ.
ಈ ಅಪಘಾತದಲ್ಲಿ ಕಾರಿನಲ್ಲಿದ್ದ ಮೂವರಿಗೆ ಗಾಯಗಳಾಗಿದ್ದು, ಅವರಿಗೆ ಸುಳ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ ಎಂದು ತಿಳಿದು ಬಂದಿದೆ.