ಮಾನ್ವಿ: ಕಾಮಗಾರಿಗೆ ನಾಮಫಲಕ ಹಾಕುವ ವಿಚಾರದಲ್ಲಿ ಆರಂಭವಾದ ಜಗಳ ವ್ಯಕ್ತಿಯೊಬ್ಬರ ಸಾವಿನಲ್ಲಿ ಕೊನೆಯಾದ ಘಟನೆ ಮಲ್ಲಿಗೆ ಮಡಗು ಗ್ರಾಮದಲ್ಲಿ ನಡೆದಿದೆ.
ಗ್ರಾಮ ಪಂಚಾಯತ್ ಸದಸ್ಯ ಮತ್ತು ಗ್ರಾಮದ ಇತರರ ನಡುವೆ ಗಲಾಟೆಯಾಗಿದ್ದು, ಇದರಲ್ಲಿ ಹಲವು ಮಂದಿ ಗಾಯಗೊಂಡಿದ್ದು, ಭೀಮೇಶ್ (45) ಎನ್ನುವವರು ಸಾವನ್ನಪ್ಪಿದ್ದಾರೆ. ರಮೇಶ್ ಎಂಬುವವರಿಗೆ ಗಂಭೀರ ಪ್ರಮಾಣದಲ್ಲಿ ಗಾಯಗಳಾಗಿದ್ದು ಕೋಮಾಗೆ ತಲುಪಿದ್ದಾರೆ ಎಂದು ತಿಳಿದು ಬಂದಿದೆ. 20 ರಷ್ಟು ಜನರಿಗೆ ತೀವ್ರ ತರದ ಗಾಯಗಳಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಈ ಘಟನೆಯಲ್ಲಿ ಮೃತಪಟ್ಟ ಭೀಮೇಶ್ ಪತ್ನಿ ಮಾನ್ವಿ ಠಾಣೆಯ ಪೊಲೀಸರಿಗೆ ದೂರು ನೀಡಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಹಾಗೆಯೇ ಗ್ರಾಮದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಬಂದೋಬಸ್ತ್ ಹಾಕಲಾಗಿದೆ. ಈ ಸಂಬಂಧ ಸುಮಾರು 19 ಕ್ಕೂ ಅಧಿಕ ಜನರ ಮೇಲೆ ದೂರು ದಾಖಲಾಗಿದೆ.